ಬ್ರಹ್ಮಾವರ : ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಕೆಮ್ಮಣ್ಣು : ರಕ್ಷಕ – ಶಿಕ್ಷಕ ಸಂಘದ ಮಹಾಸಭೆ
Published
0
ಬ್ರಹ್ಮಾವರ : ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಕೆಮ್ಮಣ್ಣು ಇಲ್ಲಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯು ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಟುಂಬ ಆಯೋಗ ಉಡುಪಿ ಧರ್ಮ ಪ್ರಾಂತ್ಯದ ಆಪ್ತ ಸಮಾಲೋಚಕಿ ಲೆಸ್ಲಿ ಆರೋಜಾ ಆಗಮಿಸಿದ್ದರು.
ಶಾಲಾ ಜಂಟಿ ಕಾರ್ಯದರ್ಶಿ ಸಿಸ್ಟರ್ ನಿವೇದಿತಾ ಎ.ಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಲ್ವಿಯಾನ್ ಎ.ಸಿ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಘವೇಂದ್ರ ಕಿಣಿ, ಶಿಕ್ಷಕ- ರಕ್ಷಕ ಸಂಘದ ಕಾರ್ಯದರ್ಶಿ ಶಿಕ್ಷಕಿ ದಿವ್ಯ ಕುಮಾರಿ, ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.
ಶಿಕ್ಷಕಿ ಸೆಲೀನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿಯರಾದ ಸುಜಾತಾ ಮತ್ತು ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ನಿಶಾ ವಂದಿಸಿದರು.