ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗು ಖ್ಯಾತ ಚಿತ್ರನಟ ಎನ್‌ಟಿ ರಾಮರಾವ್ ಅವರ ಪುತ್ರಿ, ಕಾಂತಮನೇನಿ ಉಮಾ ಮಹೇಶ್ವರಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಅಲ್ಪ ಕಾಲದಿಂದ ಅನಾರೋಗ್ಯದಲ್ಲಿದ್ದ ಕೆ.ಉಮಾ ಮಹೇಶ್ವರಿ ಬಳಲುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ ಹೈದರಾಬಾದ್‌ನಲ್ಲಿದ್ದ ತಮ್ಮ ಸ್ವಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಎನತೆಲುಗು ದೇಶಂ ಪಾರ್ಟಿ ಸಂಸ್ಥಾಪಕರಾಗಿದ್ದ ಎನ್‌ಟಿಆರ್ ಅವರ 12 ಜನ ಮಕ್ಕಳಲ್ಲಿ ಅತ್ಯಂತ ಕಿರಿಯವರಾಗಿದ್ದರು. ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ದಗ್ಗುಬಾಟಿ ಪುರಂದೇಶ್ವರಿ ಮತ್ತು ಹಾಲಿ ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರ ಸಹೋದರಿಯರು.
Advertisement. Scroll to continue reading.