ರಾಂಚಿ: ಫುಟ್ಬಾಲ್ ಆಟ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ನಾಲ್ವರು ಅಪಹರಿಸಿ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದೆ.
ಫುಟ್ಬಾಲ್ ಆಟಗಾರ್ತಿಯಾಗಿರುವ ಬಾಲಕಿ ಒಡಿಶಾದಲ್ಲಿ ನಡೆದ ಟೂರ್ನಿಯಲ್ಲಿ ಭಾಗವಹಿಸಿ, ಬಳಿಕ ರೈಲು ನಿಲ್ದಾಣದಿಂದ ತಮ್ಮ ಮನೆಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಬಂದ ನಾಲ್ವರು ಬಲವಂತವಾಗಿ ಆಟೋ ಹತ್ತಿದ್ದಾರೆ. ಬಳಿಕ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.
ಇದಕ್ಕೆ ಬಾಲಕಿ ಪ್ರತಿರೋಧ ಒಡ್ಡಿದ್ದಾಗ ಮಾರಕಾಸ್ತ್ರ ತೋರಿಸಿ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ಅಲ್ಲದೇ, ಆಟೋವನ್ನು ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಬಳಿಕ ಅವರನ್ನು ಬೆಳಗ್ಗೆ ನಗರಕ್ಕೆ ಕರೆತಂದು ವಾಪಸ್ ಬಿಟ್ಟಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಇದರನ್ವರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಅಪರಾಧಿಗಳಿಗಾಗಿ ಬಲೆ ಬೀಸಲಾಗಿದೆ.