ಶಿವಮೊಗ್ಗ : ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ; ಬಿ.ಎಸ್.ಎನ್.ಎಲ್ ಟವರ್‌ಗೆ ಮನವಿ
Published
0
ವರದಿ : ದಿನೇಶ್ ರಾಯಪ್ಪನಮಠ
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ದೂರ ಸಂಪರ್ಕ ಹಾಗೂ ರೈಲ್ವೆ ಮಂತ್ರಾಲಯದ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ 80 ಹಾಗೂ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ಜನವಸತಿ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ನೆಟ್ವರ್ಕ್ ಸಂಪರ್ಕ ಸಾಧಿಸಲು ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ರೈಲ್ವೆ ವಿಭಾಗಕ್ಕೆ ಸಂಬಂಧಪಟ್ಟಂತೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಹಾಗೂ ದಾದರ್ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮವನ್ನು ಕೂಡಲೇ ಕೈಗೊಳ್ಳಲು ಮನವಿ ಮಾಡಿಕೊಂಡರು.