ಕುಂದಾಪುರ : ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆಯ ರಿಧಮಿಕ್ ಯೋಗ ವಿಭಾಗದಲ್ಲಿ ಮಹಿಮಾ ಪ್ರಥಮ; ಜಿಲ್ಲಾ ಮಟ್ಟಕ್ಕೆ ಆಯ್ಕೆ
Published
1
ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆಯ ರಿಧಮಿಕ್ ಯೋಗ ವಿಭಾಗದಲ್ಲಿ ಮಹಿಮಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮಹಿಮಾ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
Advertisement. Scroll to continue reading.
ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ಮಾರ್ಗದರ್ಶನ ನೀಡಿದ್ದರು.