ಕಾಮನ್ವೆಲ್ತ್ ಗೇಮ್ಸ್ 2022 : ಭಾರತವು ಪ್ಯಾರಾ ಪವರ್ ಲಿಫ್ಟಿಂಗ್ ಭಾರತದ ಸುಧೀರ್ ಮೊದಲ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ದಾಖಲೆ ಬರೆದರು. ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಪ್ಯಾರಾ ಪವರ್ ಲಿಫ್ಟಿಂಗ್ ಚಿನ್ನ ಗೆದ್ದ ಮೊದಲ ಭಾರತೀಯನಾಗಿ ಹೊರ ಹೊಮ್ಮಿದರು.
ಸುಧೀರ್ ತನ್ನ ಮೊದಲ ಪ್ರಯತ್ನದಲ್ಲಿ 208 ಕೆ.ಜಿ ಭಾರ ಎತ್ತಿದರು ಮತ್ತು 132 ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದರು. ಅವರು ತಮ್ಮ ಎರಡನೇ ಪ್ರಯತ್ನದಿಂದ ಸುಧೀರ್ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿದರು. ಇದರ ಹೊರತಾಗಿಯೂ, ಸುಧೀರ್ ಎರಡನೇ ಪ್ರಯತ್ನದಲ್ಲಿ 212 ಕೆಜಿ ಎತ್ತಿ ದಾಖಲೆಯ 134.5 ಅಂಕಗಳನ್ನು ಗಳಿಸಿದರು. ನೈಜೀರಿಯಾದ ಇಕೆಚುಕುವು ಕ್ರಿಸ್ಟಿಯನ್ ಉಬಿಚುಕುವು ತಮ್ಮ ಕೊನೆಯ ಪ್ರಯತ್ನದಲ್ಲಿ 203 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಹೀಗಾಗಿ ಸುಧೀರ್ ಚಿನ್ನದ ಪದಕ ಗೆಲ್ಲುವಲ್ಲಿ ಸಫಲರಾದರು.
Advertisement. Scroll to continue reading.