ಬೆಂಗಳೂರು : ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವದಂದು ನಟ ಪುನೀತ್ ರಾಜ್ ಕುಮಾರ್‌ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇಂದಿನಿಂದ ಆಗಸ್ಟ್ 15ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 212ನೇ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದ್ದು, ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ ಎಂದರು.
Advertisement. Scroll to continue reading.
ಇದೇ ವೇಳೆ ಅವರ ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.