ವರದಿ : ಶ್ರೀದತ್ತ ಹೆಬ್ರಿ
ಕಾರ್ಕಳ : ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ರಂಗನಮಕ್ಕಿ ನಿವಾಸಿ ರಾಮಕೃಷ್ಣ ಹೆಗ್ಡೆ(55) ಇಂದು ಸಂಜೆ ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುನಿಯಾಲು ಕಾಲೇಜು ಸೇರಿದಂತೆ ವಿವಿಧೆಡೆಗಳಲ್ಲಿ ದೈಹಿಕ ಶಿಕ್ಷಕರಾಗಿ ಅವರು ಸೇವೆ ಸಲ್ಲಿಸಿದ್ದರು.
ಮುನಿಯಾಲು ಪದವಿ ಪೂರ್ವ ಕಾಲೇಜಿನಲ್ಲಿ 24 ವರ್ಷಗಳ ಕಾಲ ದೈಹಿಕ ಶಿಕ್ಷಣ ನಿರ್ದೇಶಕರಾಗಿ, ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರು ಕಳೆದ ಜನವರಿಯಲ್ಲಿ ಕಾರ್ಕಳ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದರು.
Advertisement. Scroll to continue reading.
ಅಂತರರಾಷ್ಟ್ರೀಯ ಕ್ರೀಡಾಪಟು ಮಮತಾ ಪೂಜಾರಿ ಸೇರಿದಂತೆ ಅನೇಕ ರಾಜ್ಯ ಮಟ್ಟದ ಕಬಡ್ಡಿ ಆಟಗಾರರನ್ನು ತರಬೇತಿಗೊಳಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ, ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗನನ್ನು ಅಗಲಿದ್ದಾರೆ.