ಬಿಹಾರ : ಎರಡನೇ ಬಾರಿಗೆ ಆರ್ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನ್ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ನಿತೀಶ್ ಕುಮಾರ್ 8 ನೇ ಬಾರಿಗೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ.
ಉಪ ಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸಹ ಪ್ರಮಾಣವಚನ ಸ್ವೀಕರಿಸಿದರು.
ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
Advertisement. Scroll to continue reading.