ಚಿಕ್ಕಮಗಳೂರು : ಭಾರೀ ಮಳೆಯಿಂದ ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ ಹಾಗೂ ಸರಿತಾ ಮೃತಪಟ್ಟವರು.
ತಮ್ಮ ಮನೆ ಶಿಥಿಲಗೊಂಡಿದೆ ಎಂಬ ಕಾರಣದಿಂದ ಸರಿತಾ ಎಂಬುವವರು ತನ್ನ ಇಬ್ಬರು ಮಕ್ಕಳೊಂದಿಗೆ ಚಂದ್ರಮ್ಮ ಎಂಬವರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆದರೆ ನಿನ್ನೆ ಸುರಿದ ಭಾರೀ ಮಳೆಗೆ ಚಂದ್ರಮ್ಮ ಅವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಂದ್ರಮ್ಮ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳಾದ ಸುನಿಲ್ ಮತ್ತು ದೀಕ್ಷಿತ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
Advertisement. Scroll to continue reading.
ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.