ಶ್ರೀನಗರ : ಜಮ್ಮು- ಕಾಶ್ಮೀರದಲ್ಲಿ ರಾಜೌರಿಯಿಂದ 25 ಕಿಮೀ ದೂರ ಇರುವ ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಈ ವೇಳೆ ಸಂದರ್ಭದಲ್ಲಿ, ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ಉಗ್ರರು ದಾಟಲು ಪ್ರಯತ್ನಿಸಿದ್ದು, ಈ ವೇಳೆ ಸೇನೆ ಉಗ್ರರ ಮೇಲೆ ದಾಳಿ ನಡೆಸಿದೆ.
ಈ ಸಂದರ್ಭ ಉಗ್ರರು ಮತ್ತು ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಸ್ಥಳದಲ್ಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಹಾಗೂ ಮೂವರು ಯೋಧರು ಹುತಾತ್ಮರಾದರು. ಅಲ್ಲದೇ, ಇನ್ನಿಬ್ಬರು ಗಾಯಗೊಂಡಿದ್ದು, ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
Advertisement. Scroll to continue reading.
ದಾಳಿಯ ಬಳಿಕ ದರ್ಹಾಲ್ ಪಿಎಸ್ನಿಂದ 6 ಕಿಮೀ ದೂರದಲ್ಲಿರುವ ಸ್ಥಳಕ್ಕೆ ಹೆಚ್ಚುವರಿ ತುಕಡಿಗಳನ್ನು ಕರೆಸಿಕೊಳ್ಳಲಾಗಿದ್ದು, ಉಗ್ರರ ಬೇಟೆಯಾಡುವ ಕಾರ್ಯಾಚರಣೆ ಮುಂದುವರಿದಿದೆ.