ಕರಾವಳಿ

ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

1

ಉಡುಪಿ : ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ತುಬಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಅರ್ಚಕ ಕೇಶವ ಶಾಂತಿ ನೆರವೇರಿಸಿದರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾಷಣ ಮಾಡಿ ತುಳುನಾಡಿನ ಸಂಸ್ಕೃತಿ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪನೆ, ಉದ್ದೇಶ, ಸಾಮಾಜಿಕ ಹೋರಾಟ, ಸಾಮಾಜಿಕ ನೆರವು ಹಾಗೂ ಅಗತ್ಯತೆ ಬಗ್ಗೆ ಅಚ್ಚುಕಟ್ಟಾಗಿ ವಿವರಿಸಿದರು.

ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಟಪಾಡಿ ಶಂಕರ್ ಪೂಜಾರಿ, ಸಾಮಾಜಿಕ ಕಾರ್ಯಕರ್ತ, ಉದ್ಯಮಿ ಕೃಷ್ಣಮೂರ್ತಿ ಆಚಾರ್ಯ, ಉಡುಪಿ ನಗರ ಠಾಣಾ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್, ಜನತಾದಳ ಜಾತ್ಯಾತೀತ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ್ ರಾವ್, ಹಿರಿಯ ವಕೀಲ ಹಮ್ಜತ್ ಹೆಜಮಾಡಿ, ಉಡುಪಿ ಜಿಲ್ಲಾ ಮತ್ತು ದ.ಕ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಗರ ಸಭಾ ಸದಸ್ಯ, ವಿರೋಧ ಪಕ್ಷ ನಾಯಕ ರಮೇಶ್ ಕಾಂಚನ್,

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ಧೀನ್ ಸುಬ್ರಹ್ಮಣ್ಯ ನಗರ, ಮುಖ್ಯ ಅತಿಥಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಇದರ ಸಂಸ್ಥಾಪಕ ಹಾಗೂ ಪ್ರಧಾನ ಕಾರ್ಯದರ್ಶಿ
ವಿನೋದ್ ಶೆಟ್ಟಿ, ಮಹಿಳಾ ಘಟಕ ಗೌರವ ಸಲಹೆಗಾರ ಶೋಭ ಪಾಂಗಳ, ಗೌರವ ಸಲಹೆಗಾರ ಸುಧಾಕರ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಕೃಷ್ಣ ಕುಮಾರ್, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಸುಕನ್ಯ ಪ್ರಭಾಕರ್, ಮಹಿಳಾ ಘಟಕ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಘಟಕ ಉಪಾಧ್ಯಕ್ಷ ಹಾಗೂ ಕಾನೂನು ಸಲಹೆಗಾರ ನಾಗಲಕ್ಷ್ಮಿ, ಯುವ ಘಟಕ ಅಧ್ಯಕ್ಷ ಸುನಿಲ್ ಫೆರ್ನಾಂಡಿಸ್, ಐಟಿ ವಿಂಗ್ ಅಧ್ಯಕ್ಷ ರೋಷನ್ ಡಿಸೋಜ, ಕಾರ್ಮಿಕ ಘಟಕ ಅಧ್ಯಕ್ಷ ಜುನೈದ್, ಜಿಲ್ಲಾ ಉಪಾಧ್ಯಕ್ಷ ರಹೀಂ, ಜೊತೆ ಕಾರ್ಯದರ್ಶಿ ಶುಭಾಶ್ ಸುಧಾನ್, ಕಾರ್ನಿಕ ಘಟಕ ಪ್ರಧಾನ ಕಾರ್ಯದರ್ಶಿ ರಿತೇಶ್ ರಾವ್, ಖಜಾಂಚಿ ಡ್ಯಾನಿ, ಜಿಲ್ಲಾ ಕಾರ್ಯದರ್ಶಿ ಮಜೀದ್, ಮಹಳಾ ಘಟಕ ಜಿಲ್ಲಾ ಉಪಾಧ್ಯಕ್ಷ ಶಾಂಭವಿ, ಮಹಿಳಾ ಘಟಕ ಜಿಲ್ಲಾ ಉಪಾಧ್ಯಕ್ಷ ಸುಲತ, ಮಹಿಳಾ ಘಟಕ ಜೊತೆ ಕಾರ್ಯದರ್ಶಿ ಅನುಪಮ, ರೇಣುಕಾ, ಜಿಲ್ಲಾ ಕಾರ್ಯದರ್ಶಿ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್ ನಿರೂಪಣೆ ಮಾಡಿದರು.

ಈ ಸಂದರ್ಭ ಪ್ರತಿಕ್ಷಾ ರಿಧಮಿಕ್ ವಾಯಿಸ್ ಆಫ್ ಉಡುಪಿ ಹಾಗೂ ಉಡುಪಿ ಕರೊಕೆ ತಂಡದಿಂದ ತುಳು ಸಂಗೀತ ರಸಮಂಜರಿ ಆಯೋಜಿಸಲಾಗಿತ್ತು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com