ಕರಾವಳಿ

ಕುಂದಾಪುರ : ಕೇರಳದಲ್ಲಿ ಬಂಧಿಸಲ್ಪಟ್ಟ ಇಬ್ಬರು ಶಂಕಿತ ನಕ್ಸಲ್ ವಾದಿಗಳು ಕುಂದಾಪುರ ಕೊರ್ಟ್‌ಗೆ ಹಾಜರು

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕೇರಳದಲ್ಲಿ ಬಂಧಿಸಲ್ಪಟ್ಟ ಶಂಕಿತ ನಕ್ಸಲ್‌ವಾದಿಗಳಾದ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ. ಜಿ. ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಯಾನೆ ರೆಜಿತಾ ಅವರನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರ ಮೇಲಿನ ಪ್ರಕರಣಗಳ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.


ಶಂಕರನಾರಾಯಣ ಠಾಣಾ ವ್ಯಾಪ್ತಿಯಲ್ಲಿನ 6 ಹಾಗೂ ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿನ 1 ಒಟ್ಟು 7 ಪ್ರಕರಣದ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಆದರೆ ಇವುಗಳಲ್ಲಿನ ಅಪರಾಧಗಳ ಸೆಕ್ಷನ್‌ಗಳು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಯಾಗಬೇಕಿರುವುದರಿಂದ 2 ಪ್ರಕರಣಗಳನ್ನು ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ನೀಡಲಾಯಿತು.

Advertisement. Scroll to continue reading.


ಕೇರಳದಲ್ಲಿ ಇರುವ 4 ಪ್ರಕರಣಗಳ ಪೈಕಿ ಒಂದರಲ್ಲಿ ಜಾಮೀನು ಮಂಜೂರಾಗಿದ್ದು, ಉಳಿದವುಗಳ ವಿಚಾರಣೆಗೆ ಕರ್ನಾಟಕದಿಂದ ಹೋಗಿ ಬರಬಹುದು. ಕರ್ನಾಟಕದಲ್ಲಿ ಹೆಚ್ಚಿನ ಪ್ರಕರಣಗಳು ಇರುವ ಕಾರಣ ಕರ್ನಾಟಕದ ಜೈಲಿನಲ್ಲಿ ಇರಿಸಬೇಕೆಂದು ಬಿ.ಜಿ.ಕೃಷ್ಣಮೂರ್ತಿ ನ್ಯಾಯಾಲಯಕ್ಕೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ದ. ಆದರೆ, ನ್ಯಾಯಾಲಯ ಸದ್ಯಕ್ಕೆ ಆರೋಪಿಯ ಮನವಿ ಪುರಸ್ಕರಿಸಲಿಲ್ಲ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com