ದೆಹಲಿ: ನಿಂತಿದ್ದ ಟ್ರಕ್ಗೆ ಎಸ್ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಸುಮಿತ್ (34), ಯಾಗಿತ್ (7), ತೇಜ್ಪಾಲ್ (48) ಮತ್ತು ಅವರ ಪತ್ನಿ ಬಬ್ಲಿ (40) ಮೃತಪಟ್ಟವರು.
ಕುಶಾಲಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎಸ್ಯುವಿನಲ್ಲಿ ಐವರಿದ್ದರು ಎನ್ನಲಾಗಿದೆ.
Advertisement. Scroll to continue reading.
ನಿಂತಿದ್ದ ಟ್ರಕ್ಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ವೇಳೆ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಅಪಘಾತದ ನಂತರ ಅಪರಿಚಿತ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
Advertisement. Scroll to continue reading.