ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದರು. ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ಆಕಾಲಿಕ ನಿಧನಕ್ಕೆ ಕನ್ನಡ ಮಾಧ್ಯಮದ ಪತ್ರಕರ್ತರು, ರಾಜಕಾರಣಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.
Advertisement. Scroll to continue reading.