ರಾಷ್ಟ್ರೀಯ

ವೋಟರ್ ಐಡಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ : ಚುನಾವಣಾ ಆಯೋಗ ಸ್ಪಷ್ಟನೆ

1

ನವದೆಹಲಿ : ಆಧಾರ್ ಸಲ್ಲಿಸದ ಕಾರಣ ಮತದಾರರ ಪಟ್ಟಿಯಲ್ಲಿನ ನಮೂದನ್ನು ಅಳಿಸಬಾರದು. ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ.

ಈ ವಿಷಯದ ಸುತ್ತ ಕೆಲವು ಮಾಧ್ಯಮ ವರದಿಗಳಿಗೆ ಆಯೋಗ ಸ್ಪಷ್ಟನೆ ನೀಡಿದ್ದು,

ಮಾಧ್ಯಮಗಳಲ್ಲಿ ವರದಿಯಾದ ಸುದ್ದಿಗಳನ್ನು ಉಲ್ಲೇಖಿಸಿದೆ. ನಮೂನೆ-6Bಯಲ್ಲಿ ಆಧಾರ್ ಸಲ್ಲಿಕೆ ಸ್ವಯಂಪ್ರೇರಿತವಾಗಿದೆ. ಆಧಾರ್ ಸಲ್ಲಿಸದ ಕಾರಣ ಮತದಾರರ ಪಟ್ಟಿಯಲ್ಲಿನ ಯಾವುದೇ ನಮೂದನ್ನು ಅಳಿಸಲಾಗುವುದಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

Advertisement. Scroll to continue reading.

ಕಳೆದ ಜುಲೈ 4ರಂದು ಎಲ್ಲಾ ರಾಜ್ಯಗಳಿಗೆ ಮುಖ್ಯ ಚುನಾವಣಾ ಅಧಿಕಾರಿಗಳು ನೀಡಿರುವ ನೋಟಿಸ್ ನಲ್ಲಿರುವ ಅಂಶವನ್ನು ಆಯೋಗ ಉಲ್ಲೇಖಿಸಿದೆ. ಅದರ ಪ್ರಕಾರ, ಮತದಾರರ ಗುರುತಿನ ಚೀಟಿ ಜೊತೆಗೆ ಆಧಾರ್ ಜೋಡಣೆ ಮಾಡುವುದು ಸ್ವಯಂಪ್ರೇರಿತ ಪ್ರಕ್ರಿಯೆ ಆಗಿರುತ್ತದೆ. ಆಧಾರ್ ಮತ್ತು ವೋಟರ್ ಐಡಿ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಮಾಹಿತಿ ನೀಡಿದೆ.‌

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com