2022ನೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ : ಕರ್ನಾಟಕದ ಇಬ್ಬರು ಸಾಹಿತಿಗಳಿಗೆ ಪ್ರಶಸ್ತಿ
Published
2
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2022ನೇ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಕರ್ನಾಟಕದ ಇಬ್ಬರು ಸಾಹಿತಿಗಳಿಗೆ ಪ್ರಶಸ್ತಿ ಲಭಿಸಿದೆ.
ಈ ಕುರಿತಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಅಕಾಡೆಮಿಯಿಂದ ನೀಡುವಂತ ಯುವ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಭಾಜನರಾಗಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ನೀಡುವಂತ 2022ರ ಬಾಲ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಶಿರಸಿ ಸಿದ್ದಾಪುರದ ತಮ್ಮಣ ಬೀಗಾರ ಅವರಿಗೆ ಲಭಿಸಿದೆ.
Advertisement. Scroll to continue reading.
ದಾದಾಪೀರ್ ಜೈಮನ್ ಅವರ ನೀಲಕುರಿಂಜಿ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಬಾಲ ಸಾಹಿತ್ಯ ಪ್ರಶಸ್ತಿಯನ್ನು ತಮ್ಮಣ ಬೀಗಾರ ಅವರ ಬಾವಲಿ ಗುಹೆ ಎಂಬ ಮಕ್ಕಳ ಕಾದಂಬರಿಗೆ ಲಭಿಸಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿ 50,000 ರೂ. ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.