ರಾಜ್ಯ

ಕ್ರೂಸರ್ – ಲಾರಿ ಭೀಕರ ಅಪಘಾತ; 9 ಮಂದಿ ಸಾವು

2

ತುಮಕೂರು : ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.

ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಕೂಲಿ ಕಾರ್ಮಿಕರಾಗಿದ್ದು, ರಾಯಚೂರು ಮತ್ತು ಮಾನ್ವಿ ಮೂಲದವರು ಎನ್ನಲಾಗಿದೆ. ಕ್ರೂಸರ್ನಲ್ಲಿ 23 ಜನರಿದ್ದು, ಮಾನ್ವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.

Advertisement. Scroll to continue reading.

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com