ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರ ಇವರ ವತಿಯಿಂದ ಇತ್ತೀಚೆಗೆ ಥೈಲ್ಯಾಂಡ್ನಲ್ಲಿ ನಡೆದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದ ಅಜಯ್ ದೇವಾಡಿಗ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಭರತ್ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದೇವಾಡಿಗರ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಶಂಕರ್ ಅಂಕದ ಕಟ್ಟೆ ,ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ, ಗೌರವಾಧ್ಯಕ್ಷ ಚಂದ್ರಶೇಖರ್ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಉದಯ್ ಹೇರಿಕೇರಿ ಉಪಾಧ್ಯಕ್ಷರಾದ ರಾಜು ದೇವಾಡಿಗ, ಮಾಜಿ ಅಧ್ಯಕ್ಷ ದತ್ತಾತ್ರೇಯ ದೇವಾಡಿಗ ನಾರಾಯಣ ದೇವಾಡಿಗ ದಿನೇಶ್ ದೇವಾಡಿಗ, ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.