ಮಂಗಳೂರು: ರೈಲಿನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಕಬಕ – ಪುತ್ತೂರು ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಕಾರವಾದ ಮೂಲದ ಶಿಕ್ಷಕ ರಮೇಶ್ ಮತ್ತು ನಿರ್ಮಲಾ ದಂಪತಿ ರೈಲಿನಲ್ಲಿ ರಾತ್ರಿ ಕಾರವಾರಕ್ಕೆ ರೈಲಿನಲ್ಲಿ ಹೊರಟಿದ್ದರು.
ಮಂಗಳವಾರ ನಸುಕಿನ ಜಾವ 2.30 ರ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಆತ ರೈಲಿನಿಂದ ಹಾರಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ರೈಲು ನಿಲ್ಲಿಸುವ ಚೈನ್ ಎಳೆದಿದ್ದಾರೆ. ರೈಲಿನ ವೇಗ ತಗ್ಗುತ್ತಿದ್ದಂತೆ ಅಪರಿಚಿತ ನಿರ್ಮಲಾರಿಂದ ಬಿಡಿಸಿಕೊಂಡು ರೈಲಿನಿಂದ ಹಾರಿದ್ದಾನೆ. ಈ ವೇಳೆ ಆಯತಪ್ಪಿ ನಿರ್ಮಲಾ ರೈಲ್ವೆ ಹಳಿ ಮೇಲೆ ಬಿದ್ದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.
ಬ್ಯಾಗ್‌ನಲ್ಲಿ 40,000 ರೂ. ನಗದು, ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ರೂ.ಮೌಲ್ಯದ ಸೊತ್ತುಗಳಿದ್ದವು ಎನ್ನಲಾಗಿದೆ.
ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
Advertisement. Scroll to continue reading.