ಕರಾವಳಿ

ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಕಾಲೇಜು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಎಕ್ಸಲೆಂಟ್ ಸಂಸ್ಥೆಯಲ್ಲಿ ಹುಣ್ಸೆಮಕ್ಕಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸಂಪನ್ನವಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ಸುಣ್ಣಾರಿ ಇವರ ಸಹಯೋಗದೊಂದಿಗೆ ಹುಣ್ಸೆಮಕ್ಕಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸುಣ್ಣಾರಿಯ ಎಕ್ಸಲೆಂಟ್ ಕಾಲೇಜು ಆವರಣದಲ್ಲಿ ನಡೆಯಿತು.


ಪ್ರತಿಭಾ ಕಾರಂಜಿಯನ್ನು ರಾಜು.ಕೆ ಅಸಿಸ್ಟೆಂಟ್ ಕಮೀಷನರ್‌ರವರು ಉದ್ಘಾಟಿಸಿ ಮಾತನಾಡುತ್ತಾ, “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ಉಕ್ತಿಯಂತೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸಾಧ್ಯವಾಗುತ್ತದೆ. ಅಲ್ಲದೆ ವಿದ್ಯಾರ್ಥಿಯು ಸಾಧನೆ ಮಾಡಲು ಏಕಾಗ್ರತೆ ಮತ್ತು ಸಮಯ ಪ್ರಜ್ಞೆ ಮುಖ್ಯವಾಗಿದೆ. ಇವೆರಡನ್ನೂ ಮೈಗೂಡಿಸಿಕೊಂಡರೆ ಸಾಧನೆಯ ದಾರಿ ಸುಗಮವಾಗುತ್ತದೆ ಎನ್ನುದನ್ನು ತಮ್ಮ ಸಾಧನೆಯ ಅನುಭವದ ಯಶೋಗಾಥೆಯನ್ನು ತಿಳಿಸಿದರು.

Advertisement. Scroll to continue reading.

ಪ್ರಾಸ್ತವಿಕವಾಗಿ ಅಶೋಕ್ ನಾಯಕ್ ಕ್ಷೇತ್ರ ಸಮನ್ವಯಾಧಿಕಾರಿಗಳು ಕುಂದಾಪುರ ವಲಯ ಇವರು ಮಾತನಾಡುತ್ತಾ, ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ನಾವು ಸ್ಪರ್ಧಾ ಮನೋಭಾವನೆಯನ್ನು ಎಳವೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿ ಸ್ಪರ್ಧೆಯ ನಿಯಮಗಳು ಹಾಗೂ ತೀರ್ಪುಗಾರರ ಬಗ್ಗೆ ಸವಿಸ್ತಾರ ಮಾಹಿತಿ ನೀಡಿ ಎಲ್ಲಾ ಸ್ಪರ್ಧಾಳುಗಳಿಗೆ ಶುಭವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದಿನಕರ ಶೆಟ್ಟಿ ಅಂಪಾರು ಜಿಲ್ಲಾ ಅಧ್ಯಕ್ಷರು ಕರ್ನಾಟಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲೆ ಇವರು, ಮಕ್ಕಳ ಪ್ರತಿಭಾ ಕಾರಂಜಿಯು ವ್ಯಕ್ತಿತ್ವ ವಿಕಸನಕ್ಕೆ ಜೀವಕಳೆ ತುಂಬುತ್ತದೆ. ವಿದ್ಯಾರ್ಥಿಯು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರು ಹಾಗೂ ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲರಾದ ಶ್ರೀಯುತ ಡಾ. ರಮೇಶ್ ಶೆಟ್ಟಿಯವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ “ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಪ್ರತಿಭಾಕಾರಂಜಿಯಂತಹ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಕರೆನೀಡಿ, ತೀರ್ಪುಗಾರರಿಗೆ ನಿಷ್ಪಕ್ಷಪಾತವಾಗಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಬೇಕೆಂದು ತಿಳಿಸಿದರು.


ಪ್ರತಿಭಾ ಕಾರಂಜಿಯ ವೇದಿಕೆಯಲ್ಲಿ ಅಬ್ದುಲ್ ರವೂಫ್ ಮುಖ್ಯೋಪಾಧ್ಯಾಯರು ಹೆಸ್ಕೂತ್ತೂರು ಪ್ರೌಢಶಾಲೆ, ಗಣೇಶ್ ಕುಮಾರ್ ಶೆಟ್ಟಿ ಅಧ್ಯಕ್ಷರು ಕರ್ನಾಟಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ತಾಲೂಕು, ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಎಕ್ಸಲೆಂಟ್ ಪ್ರೌಢಶಾಲೆಯ ಮುಖ್ಯೋಪಾಧ್ಯಾನಿ ಸುರೇಖಾ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

ಪ್ರತಿಭಾ ಕಾರಂಜಿಯು ವಿಭಿನ್ನ ವೇದಿಕೆಯಲ್ಲಿ ನಡೆದು ಉತ್ತಮ ಪ್ರದರ್ಶನವನ್ನು ಸಮಗ್ರ ಪ್ರಶಸ್ತಿಯನ್ನು ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡರು.
ಸಭಾ ಕಾರ್ಯಕ್ರಮದ ಸ್ವಾಗತವನ್ನು ಎಕ್ಸಲೆಂಟ್ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಸುರೇಖಾರವರು ನೆರವೇರಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಆಂಗ್ಲಭಾಷಾ ಉಪನ್ಯಾಸಕ ಪ್ರಕಾಶ್ ಆಚಾರ್‌ರವರು ನಿರ್ವಹಿಸಿ, ಕನ್ನಡ ಉಪನ್ಯಾಸಕ ಶರತ್ ಕುಮಾರ್‌ ಅವರು ವಂದಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com