ರಾಜ್ಯ

ಸೆ.1 ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೆಲಮಂಗಲಕ್ಕೆ ಆಗಮನ

2

ನೆಲಮಂಗಲ : ಧರ್ಮಸ್ಥಳದ ಎಸ್‌ಡಿಎಂಇ ಸೊಸೈಟಿ ನೆಲಮಂಗಲದ ಮಹದೇವಪುರದ ರಾಷ್ಟ್ರೀಯ ಹೆದ್ದಾರಿ 75ರ ಸಮೀಪದಲ್ಲಿ ಸ್ಥಾಪಿಸಿರುವ ಮೂರನೇ ನಿಸರ್ಗದತ್ತ ಆರೋಗ್ಯ ಕ್ಷೇಮಪಾಲನಾ ಕೇಂದ್ರವಾದ ಕ್ಷೇಮವನವನ್ನು ಸೆ.1ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ. ಬೆಳಗ್ಗೆ 11.45ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮಹದೇವಪುರ ಗ್ರಾಮದ ಸಮೀಪ 20 ಎಕರೆಯಲ್ಲಿ 93 ಕೋಟಿ ವೆಚ್ಚದಲ್ಲಿ ಕ್ಷೇಮವನ ನಿರ್ಮಾಣವಾಗಿದೆ. ಇದು ಬೆಂಗಳೂರು ಹಾಗೂ ಸುತ್ತಮುತ್ತಲ ಹತ್ತಾರು ಜಿಲ್ಲೆಯ ಜನರಿಗೆ ಆರೋಗ್ಯದ ದೃಷ್ಟಿಯಿಂದ ಬಹಳಷ್ಟು ಅನುಕೂಲವಾಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com