ಚಂದನವನ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಹೌದು, ಧ್ರುವ ತಂದೆಯಾಗುತ್ತಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಧ್ರುವ ಸರ್ಜಾ ಬಹಿರಂಗಪಡಿಸಿದ್ದಾರೆ. ಪತ್ನಿಗೆ ಪ್ರೇರಣಾಗೆ 9 ತಿಂಗಳಾಗಿದ್ದು, ಸೆಪ್ಟೆಂಬರ್ನಲ್ಲಿ ಸರ್ಜಾ ಕುಟುಂಬಕ್ಕೆ ಪುಟ್ಟ ಪುಟಾಣಿಯ ಆಗಮನದ ನಿರೀಕ್ಷೆಯಲ್ಲಿದೆ ಧ್ರುವ-ಪ್ರೇರಣಾ ದಂಪತಿ.
ಈ ಶುಭ ಸುದ್ದಿಯನ್ನು ವಿಡಿಯೋ ಹಂಚಿಕೊಳ್ಳುವ ಮೂಲಕ ಧ್ರುವ ಸರ್ಜಾ ಬಹಿರಂಗಪಡಿಸಿದ್ದಾರೆ.
ಪ್ರೇರಣಾ ಅವರ ಬೇಬಿ ಬಂಪ್ ವಿಡಿಯೋ ಶೇರ್ ಮಾಡಿರುವ ಧ್ರುವ ಸರ್ಜಾ, ನಾವು ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ.
2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು. 2020 ರಲ್ಲಿ ಸಹೋದರ ಚಿರಂಜೀವಿ ಸರ್ಜಾ ಅಗಲಿದ್ದರು. ರಾಯನ್ ಸರ್ಜಾ ಬಳಿಕ ಇದೀಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಖುಷಿ ಸಿಕ್ಕಿದೆ.