ವಾರಣಾಸಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭ ಜಿಲ್ಲಾ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಅವರು, ಸಮೀಕ್ಷೆಗೆ ಈಗಾಗಲೇ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಒಪ್ಪಿಗೆ ಸಿಕ್ಕಿದೆ ಎಂದು ಕೋರ್ಟ್ ಗಮನಕ್ಕೆ ನೀಡಿದರು. ಇದನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್, ನ್ಯಾಯಾಲಯ ಈ ವಿಚಾರದಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.
ಹೊಸ ಷರತ್ತು ವಿಧಿಸುವಂತಿಲ್ಲ :
Advertisement. Scroll to continue reading.
17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
ಎಎಸ್‌ಐ ಸಮೀಕ್ಷೆಯನ್ನು ನಿಯಮಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಮಸೀದಿ ಆಡಳಿತ ಸಮಿತಿಯು ಜಿಲ್ಲಾ ನ್ಯಾಯಾಲಯದ ಮುಂದೆ ವಾದಿಸಿದೆ ಎಂದು ಮಿಶ್ರಾ ಅವರು ತಿಳಿಸಿದ್ದಾರೆ.
ದಾವೆದಾರರಿಗೆ ಯಾವುದೇ ನೋಟಿಸ್ ನೀಡಲಾಗಿಲ್ಲ ಮತ್ತು ಯಾವುದೇ ಶುಲ್ಕವನ್ನು ವಿಧಿಸಲಾಗಿಲ್ಲ ಎಂದು ಮಸೀದಿ ಸಮಿತಿ ವಾದಿಸಿತು.
ಅರ್ಜಿದಾರರಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುವಂತಿಲ್ಲ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದ್ದಾರೆ.
Advertisement. Scroll to continue reading.