ಸಿನಿಮಾ

ಪ್ರೈಮ್ ವೀಡಿಯೋದಲ್ಲಿ ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ

0

ಚಂದನವನ : ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ತೆರೆಕಂಡ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಅಂದಹಾಗೆ, ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಹೇಮಂತ್ ಎಂ ರಾವ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಅವಿನಾಶ್, ಚೈತ್ರ ಜೆ ಆಚಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. ಗುಂಡು ಶೆಟ್ಟಿ ಜೊತೆಗೆ ಹೇಮಂತ್ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಅಲ್ಲದೇ, ಅಪಾರ ಜನಮನ್ನಣೆ ಪಡೆದಿತ್ತು.

Advertisement. Scroll to continue reading.


‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗಬಹುದು ಎಂಬ ಕುತೂಹಲ ಎದುರಾಗಿತ್ತು. ಆದರೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್‌ ಬಿ ರಿಲೀಸ್‌ ನಂತರವೇ ಎರಡೂ ಸಿನಿಮಾಗಳು ಒಟ್ಟಿಗೆ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಬಹುದು ಎನ್ನಲಾಗಿತ್ತು.

ಇದೀಗ ನಿನ್ನೆ ರಾತ್ರಿಯಿಂದಲೇ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಪ್ರೈಂ ವೀಡಿಯೋದಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಒಟಿಟಿಯಲ್ಲಿ ಸಿನಿಮಾ ನೋಡಬಹುದಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com