ರಾಜ್ಯ

ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

1

ಮೈಸೂರು : ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ಮಹದೇವು ಎಂಬುವವರ ಪುತ್ರಿ ರೇಣುಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ರೇಣುಕಾ ಎಂಬ ವಿದ್ಯಾರ್ಥಿನಿಯರು ನಂಜನಗೂಡು ತಾಲೂಕಿನ ಬಾಲಕಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಗೆ ರೇಣುಕಾಗಿ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Advertisement. Scroll to continue reading.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್‌ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com