ಬೆಂಗಳೂರು: ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಈ ಗಲಭೆಯಲ್ಲಿ ಗೊಲೀಬಾರ್ ನಡೆದಿತ್ತು. ಇದರಲ್ಲಿ ಮೂವರು ಬಲಿಯಾಗಿದ್ದರು.
ಬೆಂಗಳೂರಿನ ನಗರದ ಪಕ್ಕದಲ್ಲೇ ಇದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ವಿರುದ್ದ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ಗಲಭೆ ಉಂಟಾಗಿತ್ತು. ಈ ಗಲಭೆಯ ವೇಳೆ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಗುಂಪು ನಿಯಂತ್ರಣಕ್ಕೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ಸಂದರ್ಭ ಮೂವರು ಸಾವನ್ನಪ್ಪಿದ್ದರು.
ಯಾಸಿನ್ ಪಾಷಾ, ವಾಜಿದ್ ಖಾನ್, ಶೇಕ್ ಸಿದ್ದಿಕ್ ಮೃತಪಟ್ಟಿದ್ದರು.
Advertisement. Scroll to continue reading.
ಆರೋಪ ಮಾಡಿದ್ದ ಕಾಂಗ್ರೆಸ್ :
ಈ ಗಲಭೆಯನ್ನು ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಆರೋಪ ಮಾಡಿತ್ತು. ಅಲ್ಲದೆ, ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿದೆ ಎಂದು ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಹೀಗಾಗಿ ಈ ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಬಿಜೆಪಿ ಸರ್ಕಾರ ವಹಿಸಿತ್ತು.
ಘಟನೆಯ ಬಗ್ಗೆ ಸಂಪೂರ್ಣವಾದ ತನಿಖೆಯನ್ನು ನಡೆಸಿ 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿಯನ್ನು ನೀಡಿತ್ತು. ಈ ವರದಿಯಲ್ಲಿ ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದು ಹೇಳಲಾಗಿತ್ತು. ಅಂದು ಪೋಲಿಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆ ಬೆಂಕಿ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
ಹಾಗಿದ್ದರೂ ಈ ವರದಿಯನ್ನು ಕಾಂಗ್ರೆಸ್ ಒಪ್ಪಿರಲಿಲ್ಲ. ಚುನಾವಣಾ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಡಲಾಗಿದೆ ಎಂದು ಟೀಕಿಸಿತ್ತು. ಆದರೆ, ಇದೀಗ ಅಧಿಕಾರಕ್ಕೆ ಬಂದ ಬಳಿಕ ಇದೇ ವರದಿಯನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿದೆ.
Advertisement. Scroll to continue reading.
ಬೆಂಗಳೂರು ನಗರ ವ್ಯಾಪ್ತಿಯ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ 11-8-2020 ರಂದು ನಡೆದ ಅಹಿತಕರ ಘಟನೆಯಲ್ಲಿ ಮೃತಪಟ್ಟ ಮೂವರು ಗಲಭೆ ನಿರತರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಮತ್ತಯ ಸನ್ನಿವೇಶಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂ ನಗರ ಜಿಲ್ಲೆ ನಡೆಸಿದ ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಯನ್ನು ಸರ್ಕಾರ ಅಂಗೀಕರಿಸಿದೆ ಎಂದು ರಾಜಪತ್ರದಲ್ಲಿ ಉಲ್ಲೇಖ ಮಾಡಿದೆ.