ಬ್ರಹ್ಮಾವರ : ವಿದ್ಯುತ್ ತಂತಿ ಸ್ಪರ್ಶಿಸಿ ಮೀನುಗಾರ ಸಾವನ್ನಪ್ಪಿರುವ ಘಟನೆ ಉಪ್ಪೂರು ಗ್ರಾಮದ ಅಮ್ಮುಂಜೆ ಕೆಳಕುದ್ರು ಬಳಿ ನಡೆದಿದೆ.
ಧನಂಜಯ ಕುಂದರ್ (60) ಮೃತ ಮೀನುಗಾರ.
ಧನಂಜಯ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಶನಿವಾರ ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ವಿಪರೀತ ಮಳೆಗೆ ರಸ್ತೆಗೆ ವಿದ್ಯುತ್ ತಂತಿ ಜೋತು ಬಿದ್ದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ಧನಂಜಯ ಸ್ಪರ್ಶಿಸಿದ್ದಾರೆ. ಕೂಡಲೇ ವಿಚಾರವನ್ನು ಮೆಸ್ಕಾಂನವರಿಗೆ ತಿಳಿಸಿದ್ದು, ಅವರು ಬಂದು ವಿದ್ಯುತ್ ತಂತಿಯನ್ನು ತುಂಡರಿಸಿದ್ದಾರೆ.
Advertisement. Scroll to continue reading.
ಇನ್ನು, ತೀವ್ರ ಅಸ್ವಸ್ಥಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು, ಧನಂಜಯ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Advertisement. Scroll to continue reading.