ಬೆಂಗಳೂರು : ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿಯಾಗಿದ್ದ ಪರಿಣಾಮ, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.
ನಟ ನಾಗಭೂಷಣ ವಿರುದ್ಧ ಅಪಘಾತ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.
ವಸಂತಪುರ ರಸ್ತೆಯ ಅಪಾರ್ಟ್ಮೆಂಟ್ ಬಳಿ ಫುಟ್ ಬಾತ್ ಮೇಲೆ ಗಂಡ ಹೆಂಡತಿ ನಡೆದುಕೊಂಡು ಹೋಗುವಂತ ಸಂದರ್ಭದಲ್ಲಿ ದಂಪತಿಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಪತ್ನಿ ಸಾವನಪ್ಪಿದ್ದಾಳೆ.
ಇನ್ನೂ ಪತಿ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟ ಮಹಿಳೆಯನ್ನು ಪ್ರೇಮಾ(48) ಎಂದು ಗುರುತಿಸಲಾಗಿದ್ದು, ಪತಿ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ. ಎಸ್ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ನಾಗಭೂಷಣ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
Advertisement. Scroll to continue reading.
ಇತ್ತೀಚೆಗೆ ಬಿಡುಗಡೆಗೊಂಡ ಯಶಸ್ವೀ ಚಿತ್ರ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿದ್ದರು. ಈ ಪಾತ್ರದ ಮೂಲಕ ಜನಮನ್ನಣೆ ಗಳಿಸಿದ್ದರು.