ಮಂಗಳೂರು : ಮಹೇಶ್ ಮೋಟಾರ್ಸ್ ಮಾಲಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ ಅವರು ರವಿವಾರ ಕದ್ರಿಯ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇನ್ನು, ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
Advertisement. Scroll to continue reading.
ಬಸ್ ಮಾಲಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಉದ್ಯಮಿ, ಸಮಾಜ ಸೇವಕರು ಮತ್ತು ದಾನಿಗಳಾಗಿ ಗುರುತಿಸಿಕೊಂಡಿದ್ದ ಪ್ರಕಾಶ್ ಶೇಖ ಅವರು ಸ್ಪೂರ್ತಿಯ ಚಿಲುಮೆಯಾಗಿದ್ದರು. ಇವರ ಅಗಲಿಕೆ ಬಸ್ ಮಾಲಕರ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ಸಂತಾಪ ಸೂಚಿಸಿದ್ದಾರೆ.