ಕುಂದಾಪುರ: ಭಾನುವಾರ ರಾತ್ರಿ ಚೂರಿ ಇರಿತದಿಂದ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ ಶೇರುಗಾರ್(42)(ಬನ್ಸ್ ರಾಘು) ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂದಾಪುರದ ಖಾರ್ವಿಕೇರಿಯ ನಿವಾಸಿಯಾದ ರಾಘವೇಂದ್ರ ಶೇರುಗಾರ್ ಭಾನುವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿದೆ. ತೀವ್ರಗೊಂಡ ಗಲಾಟೆಯಲ್ಲಿ ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿಂದ ರಾಘವೇಂದ್ರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement. Scroll to continue reading.
ತೊಡೆ ಭಾಗಕ್ಕೆ ಆಳವಾಗಿ ಗಾಯವಾದ ಹಿನ್ನೆಲೆ ತೀವ್ರರಕ್ತಸ್ರಾವವಾಗಿದ್ದು, ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Advertisement. Scroll to continue reading.