ASIAN GAMES : ಭಾರತದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧ ಪಂದ್ಯದಲ್ಲಿ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದರೊಂದಿಗೆ, 23 ವರ್ಷ ಮತ್ತು 146 ದಿನಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ್ದ ಶುಭ್ಮನ್ ಗಿಲ್ ಅವರ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು.
ಟಿ20 ಸ್ವರೂಪದಲ್ಲಿ ಅವರ 6ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ನೇಪಾಳ ವಿರುದ್ಧದ ಏಷ್ಯನ್ ಗೇಮ್ಸ್ 2023 ಕ್ವಾರ್ಟರ್‌ಫೈನಲ್‌ನಲ್ಲಿ ಕೇವಲ 48 ಎಸೆತಗಳಲ್ಲಿ ತಮ್ಮ ಮೊದಲ ಟಿ20 ಶತಕವನ್ನು ತಲುಪಿದರು. 16ನೇ ಓವರ್‌ನಲ್ಲಿ ಸೋಂಪಾಲ್ ಕಾಮಿ ಎಸೆತದಲ್ಲಿ ಒಂದು ರನ್ ಗಳಿಸುವ ಮೂಲಕ ಅವರು ಈ ಮೈಲಿಗಲ್ಲು ಸಾಧಿಸಿದರು.
Advertisement. Scroll to continue reading.
ಇದೇ ವೇಳೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಅತಿ ವೇಗದ ಶತಕ ಬಾರಿಸಿದ ಐದನೇ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೂ ಭಾಜನರಾದರು.
ಯಶಸ್ವಿ ಜೈಸ್ವಾಲ್ ಅವರ ಗಮನಾರ್ಹ ಸಾಧನೆಯು ಅವರನ್ನು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕಗಳನ್ನು ಗಳಿಸಿದ ಗಣ್ಯ ಭಾರತೀಯ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತಾಯಿತು.
ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ ಬಾರಿಸಿದ ಆಟಗಾರರು :
* ರೋಹಿತ್ ಶರ್ಮಾ – 35 ಎಸೆತಗಳು
* ಸೂರ್ಯಕುಮಾರ್ ಯಾದವ್ – 45 ಎಸೆತಗಳು
* ಕೆಎಲ್ ರಾಹುಲ್ – 46 ಎಸೆತಗಳು
* ಸೂರ್ಯಕುಮಾರ್ ಯಾದವ್ – 48 ಎಸೆತಗಳು
* ಯಶಸ್ವಿ ಜೈಸ್ವಾಲ್ – 48 ಎಸೆತಗಳು
* ಸೂರ್ಯಕುಮಾರ್ ಯಾದವ್ – 49 ಎಸೆತಗಳು
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಗಳಿಸಿದ ಆಟಗಾರರು :
Advertisement. Scroll to continue reading.
ಸುರೇಶ್ ರೈನಾ, ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ