ಹಿರಿಯಡಕ : 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದ ಪ್ರಾಂಶುಪಾಲ ಮಂಜುನಾಥ ಭಟ್ಟರಿಗೆ ಅಭಿನಂದನಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಅಕ್ಟೋಬರ್ 7 ರಂದು ಶನಿವಾರ, ಪೂರ್ವಾಹ್ನ 10:30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಂಜುನಾಥ ಭಟ್ಟರನ್ನು ಸನ್ಮಾನಿಸಲಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
Advertisement. Scroll to continue reading.
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್,ಬೊಮ್ಮಾರಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಶೆಟ್ಟಿ, ಕೃಷಿ ಅರ್ಥಶಾಸ್ತ್ರಜ್ಞ ಡಾ.ಎನ್.ಎಸ್.ಶೆಟ್ಟಿ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಯ ಉಪ ನಿರ್ದೇಶಕ ಗಣಪತಿ ಕೆ., ಉಡುಪಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಪಿ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.