ಕರಾವಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

2

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಲ

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ. ಹೀಗಾಗಿ  ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರುವನ್ನು, ಅವರ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ  ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಈ ಹತ್ಯೆ ರಾಜ್ಯವನ್ನೇ ತಲ್ಲಣಗೊಳಿಸಿತ್ತು.

Advertisement. Scroll to continue reading.

ಬಳಿಕ ಈ ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದ ಎನ್ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆರೋಪಿಗಳು ಮತ್ತು ಆರೋಪಿಗಳಿಗೆ  ಸಹಕರಿಸಿದವರ ವಿರುದ್ದ ವಿಚಾರಣೆ ಕೂಡ ನಡೆಯುತ್ತಿದ್ದು, ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com