ಬೆಂಗಳೂರು : ಬಿಎಂಟಿಸಿ ಬಸ್ ಹರಿದು ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲಹಂಕದ ಮದರ್ ಡೈರಿ ಬಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಭರತ್ ರೆಡ್ಡಿ(24) ಎಂಬುದಾಗಿ ಗುರುತಿಸಲಾಗಿದೆ. ಈತ ಮತ್ತಿಕೆರೆ ನಿವಾಸಿ ಎಂಬುದಾಗಿ ತಿಳಿದು ಬಂದಿದ್ದು, ನಿನ್ನೆ ಸಂಜೆ 4.40ಕ್ಕೆ ಈ ಅವಘಡ ಸಂಭವಿಸಿದೆ.
ಬೆಂಗಳೂರಿನ ಯಲಹಂಕ ಬಳಿಯ ಮದರ್ ಡೈರಿ ಸಮೀಪದ ವೀರ ಸಾರ್ವರ್ಕರ್ ಸೇತುವೆ ಬಳಿ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.
Advertisement. Scroll to continue reading.
ಬಿಎಂಟಿಸಿ ಬಸ್ ಡಿಕ್ಕಿಯಾದ ಕೂಡಲೇ ಯುವಕ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ಬಸ್ ಚಕ್ರ ಹರಿದ ಪರಿಣಾಮ, ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ.
ಅಪಘಾತದ ಬಳಿಕ ಬಿಎಂಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.