ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಯ ವೇಳೆಯಲ್ಲೇ ಮಹಿಷ ದಸರಾ ಆಚರಣೆ ಮಾಡುವ ಕುರಿತು ಪರ ವಿರೋಧ ಚರ್ಚೆಗಳು ಕೇಳಿ ಬರುತ್ತಿದ್ದವು. ಇದೀಗ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆ ನೀಡಿದೆ.
ಮೈಸೂರು ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಅವರು ಷರತ್ತು ಬದ್ಧ ಅನುಮತಿ ನೀಡಿದ್ದಾರೆ.
ಮೆರವಣಿಗೆ/ಪ್ರತಿಭಟನೆ ನಡೆಸದೆ ಪುರಭವನದಲ್ಲಿ ಕಾರ್ಯಕ್ರಮ ನಡೆಸಲು ಮಹಿಷ ದಸರಾ ಆಚರಣೆ ಸಮಿತಿಗೆ ಅನುಮತಿ ನೀಡಲಾಗಿದೆ.
Advertisement. Scroll to continue reading.
ಈ ಕುರಿತಂತೆ ಮಾಹಿತಿ ನೀಡಿದಂತ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು, ಮಹಿಷಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅನುಮತಿ ಹಾಗೂ ಇದಕ್ಕೆ ವಿರುದ್ಧವಾಗಿ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಮಹಿಷ ಉತ್ಸವ, ಚಾಮುಂಡಿ ಚಲೋಗೆ ಮಾತ್ರ ನಿಷೇಧಾಜ್ಞೆ ಅನ್ವಯವಾಗುತ್ತದೆ. ಇನ್ನುಳಿದಂತೆ ಮದುವೆ, ಸಭೆ, ಸಮಾರಂಭ, ಶಾಲಾ-ಕಾಲೇಜಿಗೆ ಅನ್ವಯ ಆಗಲ್ಲ ಎಂದು ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕೆಡಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಚಾಮುಂಡಿಬೆಟ್ಟ ಸಂಪರ್ಕಿಸುವ ರಸ್ತೆಯಲ್ಲಿ ಪೊಲೀಸರ ನಿಯೋಜಿಸಲಾಗುವುದು. ಎಲ್ಲಾ ಕಡೆ ತಪಾಸಣೆ ನಡೆಸಿ ಮಾಡಿ ಚಾಮುಂಡಿಬೆಟ್ಟಕ್ಕೆ ಬಿಡಲಾಗುತ್ತೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
Advertisement. Scroll to continue reading.