ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತ ಯುವತಿ.
ಪಾವನ ಮಂಗಳೂರು ಖಾಸಗಿ ಮೆಡಿಕಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ಹೋಗಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Advertisement. Scroll to continue reading.
ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.