ಮಂಗಳೂರು : ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಡಿಕ್ಕಿಯಾದ ಘಟಮೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಪರಿಣಾಮ ಓರ್ವ ಯುವತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ರೂಪಶ್ರೀ (23) ಮೃತ ಯುವತಿ.
Advertisement. Scroll to continue reading.
ಸುರತ್ಕಲ್ನ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರು ಎನ್ನಲಾಗಿದೆ.
ಇನ್ನು ಇವರೊಂದಿಗಿದ್ದ ಸ್ವಾತಿ (26), ಹಿತ್ನವಿ (16), ಕೃತಿಕಾ(16) ಮತ್ತು ಯತಿಕಾ(12) ಗೆ ಗಂಭೀರ ಗಾಯಗಳಾಗಿವೆ.
5 ಮಂದಿ ಲೇಡಿಹಿಲ್ ನಿಂದ ಮಣ್ಣಗುಡ್ಡ ಜಂಕ್ಷನ್ ಕಡೆಗೆ ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಮಣ್ಣಗುಡ್ಡಯಿಂದ ಲೇಡಿಹಿಲ್ ಕಡೆಗೆ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಘಟನೆ ನಡೆದ ತಕ್ಷಣ ಪರಾರಿಯಾಗಿದ್ದ.
Advertisement. Scroll to continue reading.
ಈಗಾಗಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇನ್ನು, ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.