ಕ್ರೀಡೆ

WORLDCUP 2023 : ಶತಕ ಸಿಡಿಸಿ ದಾಖಲೆ ಬರೆದ ಕೊಹ್ಲಿ

1

WORLDCUP 2023 : ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ಇಬ್ಬರು ದೈತ್ಯ ಆಟಗಾರರ ದಾಖಲೆ ಮುರಿದಿದ್ದಾರೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಗೆದ್ದಿದೆ. ಈ ಪಂದ್ಯದಲ್ಲಿ ಕೊಹ್ಲಿ ಜಾಗತಿಕ ಕ್ರಿಕೆಟ್‌ನ ಇಬ್ಬರು ಕ್ರಿಕೆಟ್ ದಂತಕಥೆಗಳ ವಿಶ್ವಕಪ್ ದಾಖಲೆಯನ್ನು ಮುರಿದಿದ್ದಾರೆ.

ಜಯವರ್ಧನೆ ದಾಖಲೆ ಮುರಿದ ಕೊಹ್ಲಿ
ವಿಶ್ವಕಪ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ವಿಶ್ವಕಪ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ 4ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಪಟ್ಟಿಯಲ್ಲಿ 34357 ರನ್ ಗಳಿಸಿರುವ ಭಾರತದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, 28016 ರನ್ ಗಳಿಸಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ 2ನೇ ಸ್ಥಾನದಲ್ಲಿದ್ದಾರೆ. ಅಂತೆಯೇ 27483 ರನ್ ಗಳನ್ನು ಗಳಿಸಿರುವ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ 3ನೇ ಸ್ಥಾನದಲ್ಲಿದ್ದು, 25,979 ರನ್ ಗಳಿಸಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. 4ನೇ ಸ್ಥಾನದಲ್ಲಿದ್ದ ಶ್ರೀಲಂಕಾದ ಮಹೇಲಾ ಜಯವರ್ಧನೆ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

Advertisement. Scroll to continue reading.

ಕಾಲಿಸ್ ದಾಖಲೆ ಮುರಿದ ಕೊಹ್ಲಿ:


ಇದೇ ವೇಳೆ ಬಾಂಗ್ಲಾದೇಶ ವಿರುದ್ಧ ಅರ್ಧಶತಕ ಸಿಡಿಸಿದ ಕೊಹ್ಲಿ ಜಾಗತಿಕ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 264 ಬಾರಿ 50ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, 217 ಬಾರಿ ಈ ಸಾಧನೆ ಮಾಡಿರುವ ಆಸ್ಟ್ರೇಲಿಯಾದ ರಿಕ್ಕಿ ಪಾಂಟಿಂಗ್ 2ನೇ ಸ್ಥಾನದಲ್ಲಿದ್ದಾರೆ. 216 ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಶ್ರೀಲಂಕಾದ ಕುಮಾರ ಸಂಗಕ್ಕಾರ 3ನೇ ಸ್ಥಾನದಲ್ಲಿದ್ದು, 212 ಬಾರಿ ಈ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. 211 50ಕ್ಕೂ ಅಧಿಕ ರನ್ ಗಳಿಸಿ 4ನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ಜಾಕಸ್ ಕಾಲಿಸ್ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಐಸಿಸಿಯ ಸೀಮಿತ ಓವರ್ ಗಳ ಟೂರ್ನಮೆಂಟ್ ಗಳಲ್ಲಿ ಚೇಸಿಂಗ್ ವೇಳೆ 1500 ರನ್ ಗಳನ್ನು ಗಳಿಸಿದ ಜಗತ್ತಿನ ಏಕೈಕ ಬ್ಯಾಟರ್ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
 

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com