ಕ್ರೀಡೆ

WORLDCUP 2023: ದ.ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ ಹೀನಾಯ ಸೋಲು

1

WORLDCUP 2023: ಆಫ್ರಿಕಾ ತಂಡ ಇಂಗ್ಲೆಂಡ್ ತಂಡವನ್ನು 229 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. 

ವಿಶ್ವಕಪ್ 2023ರ ಪಂದ್ಯಾವಳಿಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಿತು. ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 399 ರನ್ ಗಳಿಸಿತು. ಇಂಗ್ಲೆಂಡ್ ತಂಡ 22 ಓವರ್ ಗಳಲ್ಲಿ 170 ರನ್ ಗಳಿಸಿ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್‌ನಲ್ಲಿ ಹೆನ್ರಿಕ್ ಕ್ಲಾಸೆನ್ 61 ಎಸೆತಗಳಲ್ಲಿ 109 ರನ್ ಗಳಿಸಿದರು. ಹೀಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು.

Advertisement. Scroll to continue reading.

ಏಕದಿನದಲ್ಲಿ ಇಂಗ್ಲೆಂಡ್‌‌ಗೆ ಇದು ಅತಿ ದೊಡ್ಡ ಸೋಲಾಗಿದೆ. ಇದಕ್ಕೂ ಮೊದಲು 2022ರಲ್ಲಿ ಮೆಲ್ಬೋರ್ನ್ ಮೈದಾನದಲ್ಲಿ ಆಸ್ಟ್ರೇಲಿಯಾ 221 ರನ್‌ಗಳಿಂದ ಸೋಲಿಸಿತ್ತು. ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಅತಿದೊಡ್ಡ ಗೆಲುವು ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧವೂ ಆಗಿತ್ತು. 1999ರಲ್ಲಿ ಓವಲ್‌ನಲ್ಲಿ ತಂಡ 122 ರನ್‌ಗಳಿಂದ ಸೋತಿತ್ತು. ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ 100ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದ್ದು ಇದು ಮೂರನೇ ಬಾರಿ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com