ಬೆಂಗಳೂರು : ಹುಲಿ ಉಗುರು ಲಾಕೆಟ್ ಧರಿಸಿದ್ದಂತ ಆರೋಪದಲ್ಲಿ ಬಿಗ್ ಬಾಸ್ ಮನೆಯಿಂದ ಬಂಧನಕ್ಕೆ ಒಳಗಾಗಿದ್ದಂತ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನವೆಂಬರ್ 6ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪದ ಮೇಲೆ ವರ್ತೂರು ಸಂತೋಷ್ ಬಂಧನವಾಗಿತ್ತು. ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿತ್ತು.
ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗಿತ್ತು. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.