ಕೊಚ್ಚಿ: ಕೇರಳದ ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿರುವುದು ಪತ್ತೆಯಾಗಿದೆ. ಟಫಿನ್ ಬಾಕ್ಸ್‌ನಲ್ಲಿ ಐಇಡಿಯನ್ನು ಕೇಂದ್ರದ ಒಳಗೆ ಸಾಗಿಸಲಾಗಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಕೇರಳ ಡಿಜಿಪಿ ಶೇಖ್ ದರ್ವೇಶ್ ಸಾಹೇಬ್ ಮಾಹಿತಿ ನೀಡಿದ್ದು, ಮತ್ತಷ್ಟು ತನಿಖೆ ನಡೆಸಿದ ಬಳಿಕ ಹೆಚ್ಚಿನ ವಿವರ ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.
ಕಲಮಸ್ಸೆರಿಯಲ್ಲಿರುವ ಕನ್ವೆನ್ಷನ್ ಕೇಂದ್ರದಲ್ಲಿ ಪ್ರಾರ್ಥನಾ ಸಭೆಗೆಂದು 2 ಸಾವಿರಕ್ಕೂ ಹೆಚ್ಚು ಜನರು ಸೇರಿದ್ದ ಸಂದರ್ಭದಲ್ಲಿ ಸ್ಫೋಟಗಳು ಸಂಭವಿಸಿವೆ. ಇದರ ತನಿಖೆಗೆ ಕೂಡಲೇ ವಿಶೇಷ ತಂಡ ರಚಿಸುವುದಾಗಿ ಡಿಜಿಪಿ ಹೇಳಿದ್ದಾರೆ.
ತನಿಖೆಯ ನಂತರವೇ ನಾನು ವಿವರಗಳನ್ನು ದೃಢೀಕರಿಸಬಲ್ಲೆ. ನಾವು ಎಲ್ಲಾ ಕೋನಗಳಿಂದ ಪರಿಶೀಲಿಸುತ್ತಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಶೀಘ್ರ ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
Advertisement. Scroll to continue reading.
ಜನರು ಶಾಂತಿ ಹಾಗೂ ಸಹನೆ ಕಾಪಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯ ಸಂಗತಿಗಳನ್ನು ಹಂಚಿಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಕಲಮಸ್ಸೆರಿ ಸ್ಫೋಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಖುವುದಾಗಿ ಎಕ್ಸ್ ಖಾತೆಯಲ್ಲಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಅಂದಾಜು 9.40ಕ್ಕೆ ಜಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 36 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ. ಸ್ಫೋಟಕಗಳನ್ನು ತಂದವರು ಯಾರು ಹಾಗೂ ಯಾರೆಲ್ಲ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂಬ ಬಗ್ಗೆ ತನಿಖೆಗೆ ಸುಳಿವು ಸಿಗುವ ಆಶಯದೊಂದಿಗೆ ಪೊಲೀಸರು ಸಿಸಿಟಿವಿ ಕ್ಯಾಮೆರಾ ವಿಡಿಯೋಗಳನ್ನು ಪರಿಶೀಲಿಸುತ್ತಿದ್ದಾರೆ.
Advertisement. Scroll to continue reading.