ಆಂಧ್ರಪ್ರದೇಶ : ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
Advertisement. Scroll to continue reading.
ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
Advertisement. Scroll to continue reading.