Uncategorized

ಕೇರಳ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 3 ಕ್ಕೆ ಏರಿಕೆ

1

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕಿ ಸೋಮವಾರ ಮೃತಪಟ್ಟಿದ್ದಾನೆ. ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

12 ವರ್ಷದ ಬಾಲಕಿಯನ್ನು ಅಕ್ಟೋಬರ್ 29 ರಂದು ಎರ್ನಾಕುಲಂ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆಕೆಗೆ 95% ಸುಟ್ಟ ಗಾಯಗಳಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು 12.40 ಕ್ಕೆ ನಿಧನರಾಗಿದ್ದಾರೆ : ಡಾ ಗಣೇಶ್ ಮೋಹನ್ ವೈದ್ಯಕೀಯ ಅಧೀಕ್ಷಕ ಸರ್ಕಾರಿ ವೈದ್ಯಕೀಯ ಕಾಲೇಜು ಎರ್ನಾಕುಲಂ(ANI ವರದಿ)

ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು,  ಹಲವು ಮಂದಿ ಗಾಯಗೊಂಡಿದ್ದಾರೆ.

ಈ ನಡುವೆ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸರಣಿ ಸ್ಫೋಟದ ಹೊಣೆ ಹೊತ್ತಿಕೊಂಡಿದ್ದಾನೆ. ತ್ರಿಶೂರ್‌ನ ಕೊಡಕರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಈ ಸಂಬಂಧ ತನಿಖೆ ಮುಂದುವರೆದಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com