ರಾಜ್ಯ

ಬೆಂಗಳೂರು : ಕೊನೆಗೂ ಬಲೆಗೆ ಬಿದ್ದ ಚಿರತೆ

1

ಬೆಂಗಳೂರಿ : ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಹೀಗಾಗಿ ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.

ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಬಳಿಕ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.

ಇಂದು ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು. 

Advertisement. Scroll to continue reading.

ಈ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.

ಬುಧವಾರ ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com