ನವದೆಹಲಿ : ನಾಡಿನೆಲ್ಲೆಡೆ ಇಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದೆ. 68 ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ.
ಎಕ್ಸ್ನಲ್ಲಿ ಟ್ವೀಟ್ ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಬರೆದುಕೊಂಡಿದ್ದಾರೆ.
Advertisement. Scroll to continue reading.