ಕ್ರೀಡೆ

WORLDCUP 2023 : ಮುಂದುವರಿದ ಭಾರತದ ಜೈತ್ರಯಾತ್ರೆ

1

WORLDCUP2023 : ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ದ.ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಗುರಿ ಬೆನ್ನಟ್ಟಿದ ದ.ಆಫ್ರಿಕಾ 27.1 ಓವರ್ ಗಳಲ್ಲಿ 83 ಗಳಿಸಲಷ್ಟೇ ಶಕ್ಯವಾಗಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ 62 ರನ್ ಜತೆಯಾಟವಾಡಿ ವೇಗದ ಆರಂಭ ನೀಡಿದರು. ರೋಹಿತ್ 24 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಗಿಲ್ 23 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಕೊಹ್ಲಿ119 ಎಸೆತಗಳಲ್ಲಿ 100 ರನ್ ಗಳಿಸಿ ಸಂಭ್ರಮಿಸಿದರು. ಕೊಹ್ಲಿಗೆ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 77 ರನ್ ಗಳಿಸಿ ನಿರ್ಗಮಿಸಿದರು. ಕೆಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ಗಳಿಸಿ ಔಟಾದರು.

Advertisement. Scroll to continue reading.

ಕೊಹ್ಲಿ121 ಎಸೆತಗಳಲ್ಲಿ 101 ರನ್, ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನು ಗುರಿ ಬೆನ್ನಟ್ಟುವಲ್ಲಿ ದ.ಆಫ್ರಿಕಾ ಸಫಲವಾಗದೆ ಭಾರತದ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ಮೊಹಮ್ಮದ್ ಶಮಿ 2 ವಿಕೆಟ್, ಜಡೇಜಾ 5, ಸಿರಾಜ್ 1,ಕುಲ್ ದೀಪ್ ಯಾದವ್ 2 ವಿಕೆಟ್ ಕಬಳಿಸಿದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com