ರಾಜ್ಯ

ಎಷ್ಟು ದಿನ ಸಿಎಂ ಆಗಿರ್ತಾರೆ ಅಂತ ಸಿದ್ದರಾಮಯ್ಯರಿಗೆ ಗೊತ್ತಿಲ್ಲ : ಪ್ರಧಾನಿ ಮೋದಿ

0

ಖಂಡವಾ : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದೆ. ತಾವು ಎಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಸಿದ್ದರಾಮಯ್ಯ ಅವರಿಗೆ ತಿಳಿದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

ಮಧ್ಯಪ್ರದೇಶದ ಖಂಡವದಲ್ಲಿ ಭಾನುವಾರ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದಿದ್ದಾರೆ.

Advertisement. Scroll to continue reading.

ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿದ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ಬರುತ್ತಿದೆ ಎಂದರು.

ರಾಜ್ಯ ಬಿಜೆಪಿ ನಾಯಕರು ಮೊದಲಿನಿಂದಲೂ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಖುದ್ದು ಪ್ರಧಾನಿ ಮೋದಿ ಅವರೇ ಸಿದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕುರಿತು ಮಾತನಾಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಅಧಿಕಾರ ಹಂಚಿಕೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದರ ಮಧ್ಯೆ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇವೆಲ್ಲದರ ಮಧ್ಯೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಅಂದರೆ ಜೆಡಿಎಸ್ ಶಾಸಕರು ಬೆಂಬಲ ಕೊಡಲಿದ್ದಾರೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅನ್ನು ಒಡೆಯು ಅಸ್ತ್ರ ಪ್ರಯೋಗಿಸಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com