ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಅಧಿಕ ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‌ಐಎ ಅಧಿಕಾರಿಗಳ ತಂಡವು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಿದೆ.
Advertisement. Scroll to continue reading.
ಬೆಂಗಳೂರು ಮಾತ್ರವಲ್ಲದೇ, ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ.
Advertisement. Scroll to continue reading.