ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

1

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ  ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 

ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ. ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕು. ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿದೆ.

2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯ ಮೇಲೆ ಅವರಿಗೆ ಜಾಮೀನು ನೀಡಲಾಗಿದೆ. ಸಾಕ್ಷಿಗಳನ್ನು ಹಾಳು ಮಾಡದಂತೆ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆ ನೀಡಲಾಗಿದೆ.

Advertisement. Scroll to continue reading.

ವೀಕ್ಷಕರು ಜಾಮೀನನ್ನು ದುರುಪಯೋಗಪಡಿಸಿಕೊಳ್ಳಬಾರದು ಮತ್ತು ಅವರು ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ, ಅದು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಮುರುಘಾ ಶ್ರೀಗೆ ಜಾಮೀನು ಸಿಕ್ಕರೂ ಮತ್ತೊಂದು ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯವಿಲ್ಲ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು, ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು  ಮಾಡಿದೆ.  

ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com